ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ 4ರಿಂದ

Published on

ಹಾವೇರಿ: ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.4ರಿಂದ 6ರವರೆಗೆ ಬೆಂಗಳೂರು ಹಾಗೂ ಹಾವೇರಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ಆಯೋಜಿಸಲಾಗಿದೆ.

ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು.

ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಸ್ಥಳೀಯ ಶಾಸಕರು, ಇತರರು ಭಾಗವಹಿಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net