

ಹಾವೇರಿ: ಪ್ರಥಮ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹಾನಗಲ್ಲ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ.
ವಿನಾಯಕ ತಳವಾರ (17) ಮೃತ ವಿದ್ಯಾರ್ಥಿ.
ಈತ ಹಾವೇರಿ ನಗರದ ಹೊಸಮಠ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿದ್ದ. ಎರಡು ವಿಷಯಗಳಲ್ಲಿ ಅನುತ್ತೀರ್ಣ ಆಗಿದ್ದರಿಂದ ಅದನ್ನೆ ಮನಸ್ಸಿಗೆ ಹಚ್ಚಿಕೊಂಡು ಜಿಗುಪ್ಸೆಯಾಗಿ ತನ್ನ ವಾಸದ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲನೆ ನಡೆಸಿದರು. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.