ಹಾವೇರಿ: ಬೆಂಗಳೂರು ಬಾಲಭವನ ಸೊಸೈಟಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಾವೇರಿ ನಗರದ ಜಿಲ್ಲಾ ಬಾಲಭವನ ಸೊಸೈಟಿಯಲ್ಲಿ ಮೇ 13ರಿಂದ 27ರವರೆಗೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಆಯೋಜಿಸಲಾಗಿದೆ
ಶಿಬಿರದಲ್ಲಿ 5ರಿಂದ 16 ವರ್ಷದೊಳಗಿನ ಮಕ್ಕಳಿಗೆ ಅವಕಾಶವಿದ್ದು, 60 ಮಕ್ಕಳಿಗೆ ಮಾತ್ರ ಪ್ರವೇಶಾವಕಾಶ ಇರುತ್ತದೆ. ಶಿಬಿರದಲ್ಲಿ ಯೋಗ, ನೃತ್ಯ, ಚಿತ್ರಕಲೆ, ಕರಕುಶಲ ಕಲೆ, ಕಸದಿಂದ ರಸ, ಸಮೂಹ ಸಂಗೀತ, ಸಮೂಹ ನೃತ್ಯ, ಇತ್ಯಾದಿ ಚಟುವಟಿಕೆಗಳನ್ನು ಆಯೋಜಿಸಲಾಗುವುದು ಹಾಗೂ ಕಲಿಕಾ ಸಾಮಗ್ರಿಗಳನ್ನು ಮಾತ್ರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ ತಿಳಿಸಿದ್ದಾರೆ.