ಶಿಕ್ಷಣ ದಿನಾಚರಣೆ, ಸನ್ಮಾನ ಸಮಾರಂಭ ಸೆ.5ರಂದು

Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಹಾವೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಯೋಗದಲ್ಲಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 135ನೇ ಜನ್ಮದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಸನ್ಮಾನ ಸಮಾರಂಭವನ್ನು ಸೆ.5ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ಯೋಜಿಸಲಾಗಿದೆ.
ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟನೆ ನೆರವೇರಿಸುವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರುದ್ರಪ್ಪ ಲಮಣಿ, ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇಳಕಲ್ ಜನಾಪದ ವಿದ್ವಾಂಸ ಡಾ.ಶಂಭು ಬಳಿಗಾರ ಉಪನ್ಯಾಸಕರಾಗಿ ಭಾಗವಹಿಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net