ಅರ್ಹತಾ ಪರೀಕ್ಷೆ ಕಡ್ಡಾಯ ಮರುಪರಿಶೀಲನಾ ಅರ್ಜಿ ಸಲ್ಲಿಸಿ; ರಾಜ್ಯ ಸರ್ಕಾರಕ್ಕೆ ಬಸವರಾಜ ಗುರಿಕಾರ ಮನವಿ

10 HVR 5
Published on

ಹಾವೇರಿ: ಸೇವೆಯಲ್ಲಿ ಇರುವ ಶಿಕ್ಷಕರಿಗೆ ಶಿಕ್ಷಕರ ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಿರುವ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಮರು ಪರಿಶೀಲಿಸುವಂತೆ ರಾಜ್ಯ ಸರ್ಕಾರ ಮರು ಪರಿಶೀಲನಾ ಅರ್ಜಿಯನ್ನು ತಕ್ಷಣ ಸಲ್ಲಿಸಬೇಕೆಂದು ಅಖಿಲ ಭಾರತ ಶಿಕ್ಷಕರ ಫೆಡರೇಶನ್‌ನ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಗುರಿಕಾರ ಒತ್ತಾಯಿಸಿದರು.

ನಗರದ ಗುರುಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹಾವೇರಿ ಜಿಲ್ಲಾ ಘಟಕದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಅಖಿಲ ಭಾರತ ಶಿಕ್ಷಕರ ಫೆಡರೇಶನ್ ವತಿಯಿಂದ ಈಗಾಗಲೇ ಮರು ಪರಿಶೀಲನೆ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಈ ತಿಂಗಳಲ್ಲಿ ರಿಟ್ ಅರ್ಜಿಯನ್ನೂ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗುವುದು. ಈ ಕುರಿತು ಅ.11ರಂದು ನವದೆಹಲಿಯಲ್ಲಿ ಶಿಕ್ಷಕರ ಫೆಡರೇಶನ್ ಸಭೆ ಕರೆಯಲಾಗಿದೆ ಎಂದರು.

ಹಾವೇರಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಪಿ. ಶಿಡೇನೂರು ಮಾತನಾಡಿ, ಪ್ರಸ್ತುತ ಸೇವೆಯಲ್ಲಿರುವ ಶಿಕ್ಷಕರಿಗೆ ಅರ್ಹತಾ ಪರೀಕ್ಷೆ ಕಡ್ಡಾಯ ಎಂಬುದು ಸಮಂಜಸವಲ್ಲ ಎಂದರು.

ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲೇಶ ಕರಿಗಾರ, ಶಿಕ್ಷಕರ ಸಂಘದ ರಾಜ್ಯ ಪದಾಧಿಕಾರಿ ಪಿ.ಟಿ.ಕಾಮನಹಳ್ಳಿ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಚಳ್ಳಾಳ, ಪದಾಧಿಕಾರಿಗಳಾದ ಎಂ.ಎಸ್.ಬಡಿಗೇರ, ಈರನಗೌಡ ಅಗಸಿಬಾಗಿಲ, ಜಿ.ಬಿ.ಬೂದಿಹಾಳ, ಎಂ.ಬಿ.ವಡೆಯರ, ಬಸವರಾಜ ಹಳೆಮನಿ, ಎಚ್.ಎಂ.ಸುತಾರ, ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net