ನಾಗೇಂದ್ರನಮಟ್ಟಿಯಲ್ಲಿ ಡ್ರೈಡೇಗೆ ಚಾಲನೆ

9 HVR 7
Published on

ಹಾವೇರಿ: ನಾಗೇಂದ್ರನಮಟ್ಟಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಡ್ರೈ ಡೇ ಸ್ವಚ್ಛತಾ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಚಾಲನೆ ನೀಡಿದರು.
ಗ್ರಾಮದ ಮನೆಗಳಿಗೆ ತೆರಳಿ ಲಾರ್ವಾ ಸಮೀಕ್ಷೆ ಮಾಡಿ, ಲಾರ್ವಾ ನಾಶಪಡಿಸಿಲಾಯಿತು. ಡೆಂೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರಿಗೆ, ಸಾರ್ವಜನಿಕರಿಗೆ ಆರೋಗ್ಯ ಜಾಗೃತಿ ಮೂಡಿಸಲಾಯಿತು.
ನಗರ ಸಭೆ ಆರೋಗ್ಯ ನಿರೀಕ್ಷಣಾಧಿಕಾರಿ ಅಲ್ತಾಮಶ್, ಚಂದ್ರು ಬಿದರಿ, ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರಶೇಖರ ಹಿತ್ತಲಮನಿ, ತಾಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎ.ಪಿ.ಪಾಟೀಲ, ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ, ಆರೋಗ್ಯ ಸುರಕ್ಷಾಧಿಕಾರಿ ಅಂಜನಾ, ಆಶಾ ಕಾರ್ಯಕರ್ತೆಯರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net