ಹಾವೇರಿ: ಕರ್ನಾಟಕ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಕೈಟ್ 2025ರ ಎರಡನೇ ಆವೃತ್ತಿ ಫೆ.26ರಿಂದ 28ರವರೆಗೆ ಬೆಂಗಳೂರು ಇಂಟರ್ನ್ಯಾಷನಲ್ ಎಕ್ಸಿಬಿಷನ್ ಸೆಂಟರ್‌ನಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ 30ಕ್ಕೂ ಹೆಚ್ಚು ದೇಶಗಳ ಖರೀದಿದಾರರು ಭಾಗವಹಿಸುವರು. ಜಿಲ್ಲೆಯ ಸ್ಥಳೀಯ ರೆಸಾರ್ಟ್‌ಗಳು, ಪ್ರಯಾಣ ನಿರ್ವಾಹಕರು, ಹೋಟೆಲ್ ಉದ್ಯಮಿಗಳು ಮತ್ತು ಇತರೆ ಉದ್ಯಮ ಪ್ರತಿನಿಧಿಗಳು ವೈವಿಧ್ಯಮಯ ಪ್ರವಾಸೋದ್ಯಮ ಕೊಡುಗೆಗಳನ್ನು ಪ್ರದರ್ಶಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ‘ಎ’ ಬ್ಲ್ಯಾಕ್ ಎರಡನೇ ಮಹಡಿ ಜಿಲ್ಲಾಡಳಿತ ಭವನ ದೇವಗಿರಿ, ಹಾವೇರಿ ಇಲ್ಲಿ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.