ಸೂಕ್ತ ಚಿಕಿತ್ಸೆಗೆ ಬೊಮ್ಮಾಯಿ ಆಗ್ರಹ

28 HVR 1 A
Published on

ಹಾವೇರಿ: ಹಾವೇರಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತದಲ್ಲಿ 13 ಜನರು ಸಾವಿಗೀಡಾಗಿರುವ ಸುದ್ದಿ ಕೇಳಿ ಆಘಾತವಾಗಿದೆ. ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಸ್ಥರಿಗೆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ನೀಡಬೇಕು. ಹಾಗೂ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು ಎಂದು ಬಸವರಾಜ ಬೊಮ್ಮಾಯಿ ಎಕ್ಸ್ ಮೂಲಕ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net