ತುಮ್ಮಿನಕಟ್ಟಿ: ಇಲ್ಲಿನ ದೇವಾಂಗದವರ ಓಣಿಯ ಶ್ರೀ ಬನಶಂಕರಿ ದೇವಿ ದೇವಸ್ಥಾನದ ಕೀಲಿ ಮುರಿದು 5.21 ಲಕ್ಷ ರೂ. ಮೌಲ್ಯದ ದೇವಿಯ ಚಿನ್ನಾಭರಣ ಹಾಗೂ ಕಾಣಿಕೆ ಹುಂಡಿಯಲ್ಲಿದ್ದ ಹಣ ಕದ್ದು ಪರಾರಿಯಾಗಿರುವ ಘಟನೆ ಶುಕ್ರವಾರ ನಸುಕಿನ ಜಾವ ನಡೆದಿದೆ.
ದೇವಿಯ ಬೆಳ್ಳಿ ಕವಚ, ಬೆಳ್ಳಿ ಖಡ್ಗ, ಚಿನ್ನದ ಮುಖ, ತಾಳಿ, ಗುಂಡಿನ ಸರ, ಕಾಣಿಕೆ ಹುಂಡಿಯಲ್ಲಿದ್ದ ಅಂದಾಜು 15,000 ನಗದು ಸೇರಿ 5.21 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಪದೇಪದೆ ದೇವಸ್ಥಾನಗಳಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಈ ಕುರಿತು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕಿದೆ. ಕಳ್ಳರನ್ನು ಪತ್ತೆ ಹಚ್ಚಬೇಕಿದೆ.