ನೇರ ಸಂದರ್ಶನ 20ರಂದು; ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ

Published on

ಹಾವೇರಿ: ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ಜೂ.20ರಂದು ಬೆಳಗ್ಗೆ 11 ಗಂಟೆಗೆ ಹಾವೇರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜರುಗಲಿದೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯ ಪುರುಷ ಹಾಗೂ ಮಹಿಳಾ ಉದ್ಯೋಗಾಕಾಂಕ್ಷಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಝರಾಕ್ಸ್ ಪ್ರತಿಯೊಂದಿಗೆ ಈ ನೇರ ಸಂದರ್ಶನ ದಿನದಂದು ನೋಂದಾಯಿಸಿಕೊಂಡು ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ.08375-249291 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net