ಬೃಹತ್ ಉದ್ಯೋಗ ಮೇಳ ಅ.20ರಂದು

Published on

ಹಾವೇರಿ: ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ಸಹಕಾರದೊಂದಿಗೆ ಹಲವು ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲು ಅ.20ರಂದು ಬೆಂಗಳೂರಿನ ಎಸ್.ನಿಜಲಿಂಗಪ್ಪ ಕಾಲೇಜ್ ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ರಾಜ್ಯದ ವಿವಿಧ ವಲಯಗಳಿಂದ 100ಕ್ಕೂ ಹೆಚ್ಚು ಪ್ರತಿಷ್ಠಿತ ಬೃಹತ್, ಮಧ್ಯಮ ಹಾಗೂ ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. ಹಾವೇರಿ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಭಾಗವಹಿಸಲು ಲಿಂಕ್ https://jobfair.calicut.nielit.in/ ಮೂಲಕ ನೋಂದಾಯಿಸಿಕೊಂಡು ಈ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೌಶಲಾಭಿವೃದ್ಧಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net