ಹಾವೇರಿ ವಿಶ್ವವಿದ್ಯಾಲಯಕ್ಕೆ ಯುಜಿಸಿ ಮಾನ್ಯತೆ

Haveri university 1
Published on

ಹಾವೇರಿ: ಧಾರವಾಡದ ವಿಶ್ವವಿದ್ಯಾಲಯದಿಂದ ಪ್ರತ್ಯೇಕಗೊಂಡು ನೂತನವಾಗಿ ಸ್ಥಾಪಿತವಾಗಿರುವ ಇಲ್ಲಿನ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗ (ಯುಜಿಸಿ) ಜುಲೈ 25ರಂದು ಅಧಿಕೃತ ಮಾನ್ಯತೆ ನೀಡಿದೆ.
ಯುಜಿಸಿ ಪಟ್ಟಿ ಮಾಡಿರುವ ಎಲ್ಲ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ನೀಡಲು ಹಾವೇರಿ ವಿಶ್ವವಿದ್ಯಾಲಯ ಸ್ವಾಯತ್ತತೆ ಪಡೆದುಕೊಂಡಿದೆ. ಹಾವೇರಿ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಹಾವೇರಿ ವಿಶ್ವವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸರ್ಕಾರ 2022ರಲ್ಲಿ ಹಸಿರು ನಿಶಾನೆ ನೀಡಿತ್ತು. 2023ರ ಶೈಕ್ಷಣಿಕ ಸಾಲಿನಲ್ಲಿ 42 ಪದವಿ ಮಹಾವಿದ್ಯಾಲಯಗಳು ಹಾವೇರಿ ವಿಶ್ವವಿದ್ಯಾಲಯದ ಅಡಿಯಲ್ಲಿ ಸಂಯೋಜನೆ ಪಡೆದುಕೊಂಡಿವೆ. ಪ್ರಥಮ ಸೆಮಿಸ್ಟರ್‌ನ ಪದವಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಶೀಘ್ರವೇ ಸ್ನಾತಕೋತ್ತರ ವರ್ಗಗಳಿಗಾಗಿ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕುಲಸಚಿವ ಡಾ.ಎಸ್.ಟಿ. ಬಾಗಲಕೋಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net