

ಹಾವೇರಿ: ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ನಿರ್ಧಾರ ಕೈಬಿಟ್ಟು, ಯಥಾಸ್ಥಿತಿಯಲ್ಲಿ ವಿಶ್ವವಿದ್ಯಾಲಯ ಉಳಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಯಿ ಅವರಿಗೆ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕ ಹಾಗೂ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು
ನಗರದಲ್ಲಿ ಸೋಮವಾರ ಸಂಸದರಿಗೆ ಮನವಿ ಸಲ್ಲಿಸಿದರು. ಯಾವುದೇ ಅನುದಾನ ಬರದಿರುವ ಸಂದರ್ಭದಲ್ಲಿಯೂ ವಿಶ್ವ ವಿದ್ಯಾಲಯವು ಚೆನ್ನಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಅಗತ್ಯ ಅನುದಾನ ನೀಡಿ ಬಲಪಡಿಸುವ ಬದಲು ವಿಶ್ವವಿದ್ಯಾಲಯವನ್ನು ಮುಚ್ಚುವುದು ಸರಿಯಲ್ಲ.
ಹಾವೇರಿ ವಿವಿಯಲ್ಲಿ ಹಾಗೂ ವಿವಿ ಅಡಿಯಲ್ಲಿರುವ 42 ಪದವಿ ಕಾಲೇಜ್‌ಗಳ ಸಾವಿರಾರು ವಿದ್ಯಾರ್ಥಿಗಳು, ನೂರಾರು ಬೋಧಕ ಮತ್ತು ಬೋಧಕೇತರ ವರ್ಗದ ಭವಿಷ್ಯ ಅತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣವನ್ನು ಕೇವಲ ಲಾಭದ ದೃಷ್ಟಿಯಲ್ಲಿ ಪರಿಗಣಿಸದೆ ಮಾನವ ಸಂಪನ್ಮೂಲ ಅಭಿವೃದ್ಧಿಯ ದೃಷ್ಟಿಯಿಂದ ಪರಿಗಣಿಸಿ ಹಾವೇರಿ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಿ ವಿವಿ ಉಳಿಸಿ, ಬೆಳೆಸಲು ತುರ್ತಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದರು.
ಹಾವೇರಿ ವಿವಿ ಅತಿಥಿ ಉಪನ್ಯಾಸಕ ಡಾ.ರವೀಂದ್ರಕುಮಾರ ಬಣಕಾರ, ಡಾ.ಸಂತೋಷ ಆಲದಕಟ್ಟಿ, ಅಭಿಷೇಕ ದೊಡ್ಡಮನಿ, ಇತರರಿದ್ದರು.