ಹಾವೇರಿ: ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯ ಹಾಗೂ ಟಿಎಂಎಇ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಡಿ.4, 5ರಂದು ಜಿಲ್ಲಾ ಕ್ರೀಡಾಂಗಣದಲ್ಲಿ 2024-25ನೇ ಸಾಲಿನ ಪ್ರಥಮ ಅಂತರ್ ಮಹಾವಿದ್ಯಾಲಯಗಳ ಅಥ್ಲೆಟಿಕ್ಸ್ ಕ್ರೀಡಾಕೂಟ ಆಯೋಜಿಸಲಾಗಿದೆ.
ಡಿ.4ರಂದು ಬೆಳಗ್ಗೆ 9 ಗಂಟೆಗೆ ಹಾವೇರಿ ವಿವಿ ಕುಲಪತಿ ಡಾ.ಸುರೇಶ ಜಂಗಮಶೆಟ್ಟಿ ಉದ್ಘಾಟಿಸುವರು. ಸಂಸ್ಥೆಯ ಅಧ್ಯಕ್ಷ ಹರಪನಹಳ್ಳಿಯ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಸಂಸ್ಥೆಯ ಕಾರ್ಯದರ್ಶಿ ಡಾ.ಟಿ.ಎಂ.ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸುವರು. ಶಾಸಕ ರುದ್ರಪ್ಪ ಲಮಾಣಿ ಧ್ವಜಾರೋಹಣ ನೆರವೇರಿಸಲಿದ್ದು, ಕವಿವಿ ಕುಲಪತಿ ಡಾ.ಬಿ.ಎಂ.ಪಾಟೀಲ ಕ್ರೀಡಾಜ್ಯೋತಿ ಉದ್ಘಾಟಿಸುವರು. ಹಾವೇರಿ ವಿವಿ ಕುಲಸಚಿವ ಡಾ.ಎಸ್.ಟಿ.ಬಾಗಲಕೋಟಿ, ಸಿಎನ್.ಸೊರಟೂರ, ಇತರರು ಪಾಲ್ಗೊಳ್ಳಲಿದ್ದಾರೆ.