ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಇಂದು ಚಾಲನೆ

Published on

ಹಾವೇರಿ: ಧಾರವಾಡ ಹಾಗೂ ಕೆ.ಎಸ್.ಆರ್. ಬೆಂಗಳೂರ ನಗರಗಳ ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಜೂ.27ರಂದು ಬೆಳಗ್ಗೆ ಧಾರವಾಡ ರೈಲು ನಿಲ್ದಾಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಹಾವೇರಿ ನಿಲ್ದಾಣಕ್ಕೆ ಬೆಳಗ್ಗೆ 11.15ಕ್ಕೆ ಆಗಮಿಸಲಿದೆ. ಈ ರೈಲು ಹಾವೇರಿ, ರಾಣೆಬೆನ್ನೂರು, ಹರಿಹರ ಹಾಗೂ ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net