ಹಾವೇರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗ್ರಾಮ ಸಂಪರ್ಕ ಯೋಜನೆಯಡಿ 2025-26ನೇ ಸಾಲಿನಲ್ಲಿ ಬೀದಿನಾಟಕ ಹಾಗೂ ಜನಪದ ಸಂಗೀತ ಕಾರ್ಯಕ್ರಮ ನೀಡಲು ನೋಂದಾಯಿತ ಬೀದಿನಾಟಕ ಹಾಗೂ ಜನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೀದಿನಾಟಕ ತಂಡದಲ್ಲಿ ಎಂಟು ಕಲಾವಿದರು ಇರಬೇಕು. ಈ ಪೈಕಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರಬೇಕು. ಸಂಗೀತ ಕಲಾತಂಡದಲ್ಲಿ ಕಡ್ಡಾಯವಾಗಿ ಮೂರು ಕಲಾವಿದರು ಇರಬೇಕು. ಈ ಪೈಕಿ ಕಡ್ಡಾಯವಾಗಿ ಒಬ್ಬರು ಮಹಿಳಾ ಕಲಾವಿದರು ಹಾಗೂ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ಓರ್ವ ಕಲಾವಿದರನ್ನು ಹೊಂದಿರಬೇಕು. ಜಿಲ್ಲೆಯ ಯಾವುದೇ ಸ್ಥಳದಲ್ಲಿ ಪ್ರದರ್ಶನ ಮಾಡಲು ಸಿದ್ಧವಿರಬೇಕು. ಆಯ್ಕೆ ಸಂದರ್ಭದಲ್ಲಿ ಭಾಗವಹಿಸಿದ ಕಲಾವಿದರು ಕಾರ್ಯಕ್ರಮ ಪ್ರದರ್ಶನದ ಸಂದರ್ಭದಲ್ಲಿ ಕಲಾವಿದರ ಬದಲಾವಣೆ ಮಾಡುವಂತಿಲ್ಲ. ಜಿಲ್ಲಾಮಟ್ಟದ ಆಯ್ಕೆ ಸಮಿತಿಯ ಮೂಲಕ ಮೂರು ಬೀದಿನಾಟಕ ಹಾಗೂ ಮೂರು ಜಾನಪದ ಕಲಾ ತಂಡಗಳನ್ನು ಆಯ್ಕೆ ಮಾಡಲಾಗುವುದು.
ಆಸಕ್ತ ಕಲಾತಂಡಗಳು ಅಗತ್ಯ ದಾಖಲೆಯೊಂದಿಗೆ ಜುಲೈ 28ರ ಸಂಜೆ 5 ಗಂಟೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ವಾರ್ತಾಧಿಕಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಿದ್ಯಾನಗರ ಹಾವೇರಿ -581110 ಈ ವಿಳಾಸಕ್ಕೆ ಸಲ್ಲಿಸಬೇಕು ಸಲ್ಲಿಸಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಭಾರತಿ ಎಚ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.