ಹಾವೇರಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಇಂದಿರಾಗಾಂಧಿ, ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 2024-25ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕೆ ಶೇ.25ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಅಂಗವಿಕಲ ಮಕ್ಕಳು, ಎಚ್.ಐ.ವಿ.ಗೆ ತುತ್ತಾದವರ ಮಕ್ಕಳು, ಒಬ್ಬ ಪಾಲಕರನ್ನು ಹೊಂದಿದ ಅಥವಾ ಅನಾಥ ಮಕ್ಕಳಿಗೆ ಶೇ.10ರಷ್ಟು ಮೀಸಲಾತಿ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.