ಶ್ರೀ ವೀರಭದ್ರೇಶ್ವರ ದೇವರ ಜಾತ್ರೆ 29ರಿಂದ

21 veerabhadreshwara
Published on

ಹಾವೇರಿ: ನಗರದ ಎಂಜಿ ರಸ್ತೆ ಸಮೀಪದ ಶ್ರೀ ವೀರಭದ್ರೇಶ್ವರ ದೇವರ ಜಾತ್ರಾ ಮಹೋತ್ಸವ ಅ.29ರಿಂದ ನ.2ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.
ಅ.29ರಂದು ಬೆಳಗ್ಗೆ 9.30ರಿಂದ 10.30ರವರೆಗೆ ಶ್ರೀ ವೀರಭದ್ರ ದೇವರಿಗೆ ಕಂಕಣಧಾರಣ, ಅ.30ರಂದು ಮಧ್ಯಾಹ್ನ 12 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಹೂವಿನ ತೇರು ಹೊರಡಲಿದೆ.
ಅ.31ರಂದು ಬೆಳಗ್ಗೆ ಪುರಸಿದ್ದೇಶ್ವರ ದೇವಸ್ಥಾನದಿಂದ ಗುಗ್ಗಳ ಆರಂಭವಾಗಿ ವೀರಭದ್ರೇಶ್ವರ ದೇವಸ್ಥಾನ ತಲುಪಲಿದೆ. ನಂತರ ಅಗ್ನಿಕುಂಡ ಹಾಯುವುದು, ಸಂಜೆ 6 ಗಂಟೆಗೆ ಸಕಲ ವಾದ್ಯಗಳೊಂದಿಗೆ ರಥೋತ್ಸವ ನೆರವೇರಲಿದೆ ಎಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net