ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ ಸಾಲ, ಜೀವಜಲ, ಕಾಯಕ ಕಿರಣ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ)ಗಳಡಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ (ಪ್ರವರ್ಗ-3ಬಿ) ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಸೀಡ್ ಮಾಡಿಸಿರಬೇಕು.
ಮೇಲ್ಕಂಡ ಯೋಜನೆಗಳಿಗೆ ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅ.30ರೊಳಗಾಗಿ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಠಿಠಿ://ಡ್ಝಛ್ಚ್ಝ.ಚ್ಟ್ಞಠಿ.ಜಟ.ಜ್ಞಿ ವೆಬ್‌ಸೈಟ್ ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ಅಭಿವೃದ್ಧಿ ನಿಗಮದ ಕಚೇರಿ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net