ನೀರಿನ ಸಮಸ್ಯೆ ಬಗೆಹರಿಸಲು ಮಹಾಸಭಾ ಮನವಿ

11 HVR 2
Published on

ಹಾವೇರಿ: ಜಿಲ್ಲೆಯಾಗಿ 25 ವರ್ಷ ಕಳೆದರೂ ಜಿಲ್ಲಾ ಕೇಂದ್ರ ಹಾವೇರಿಗೆ ಕುಡಿಯುವ ನೀರು ಸೇರಿದಂತೆ ಇತರ ಅಗತ್ಯ ಸೌಲಭ್ಯಗಳನ್ನು ಪೂರೈಸಲು ಆಗಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಕೋರಿಶೆಟ್ಟರ್ ನೂತನ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀರ ಅವರಲ್ಲಿ ಮನವಿ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನೂತನ ಸಚಿವರನ್ನು ಸ್ವಾಗತಿಸಿದ ಅವರು ಜಿಲ್ಲೆಯ ಸಮಸ್ಯೆಗಳ ಕುರಿತು ಮನವಿ ಪತ್ರ ಸಲ್ಲಿಸಿದರು. ಜಿಲ್ಲೆಯಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ನಗರದಲ್ಲಿ ಅನೇಕ ವರ್ಷಗಳಿಂದ ಕುಡಿಯುವ ನೀರು, ಯುಜಿಡಿ, ಚರಂಡಿ ಸಮಸ್ಯೆಗಳು ಜೀವಂತವಾಗಿವೆ. ಈ ಬಗ್ಗೆ ತಾವು ಸೂಕ್ತ ಕ್ರಮ ಕೈಗೊಂಡು ಎಲ್ಲವನ್ನೂ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸಚಿವರು ಸೂಕ್ತವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು ಎಂದು ಕೋರಿಶೆಟ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರುಪಾಕ್ಷಪ್ಪ ಕಡ್ಲಿ, ತಾಲೂಕು ಘಟಕದ ಖಜಾಂಚಿ ವೈ.ವಿ.ಟೊಂಕದ, ಶಿಗ್ಗಾಂವಿ ತಾಲೂಕು ಅಧ್ಯಕ್ಷ ಎನ್.ಬಿ.ಯಲಿಗಾರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net