ಅಖಿಲ ಭಾರತ ವೀರಶೈವ ಮಹಾಸಭಾದಿಂದ ವಚನ ಸ್ಪರ್ಧೆ ಮೇ 5ರಂದು

Published on

ಹಾವೇರಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಬಸವ ಜಯಂತಿ ಅಂಗವಾಗಿ ಮೇ 5ರಂದು ಬೆಳಗ್ಗೆ 10 ಗಂಟೆಗೆ ನಗರದ ದಾನೇಶ್ವರಿ ನಗರದ ಪದವಿಪೂರ್ವ ಮಹಾವಿದ್ಯಾಲಯದ ಸಮುದಾಯ ಭವನದಲ್ಲಿ ಬಸವ ಜಯಂತಿ ಅಂಗವಾಗಿ ವಚನ ಸ್ಪರ್ಧೆ ಏರ್ಪಡಿಸಲಾಗಿದೆ.
5ರಿಂದ 16 ವರ್ಷದ ಒಳಗಿನವರು ನೇರವಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಉಚಿತ ನೋಂದಣಿ ಇದ್ದು, ವಿಜೇತರಿಗೆ ನಗದು ಬಹುಮಾನ ವಿತರಿಸಲಾಗುವುದು ಎಂದು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್.ಕೋರಿಶೆಟ್ಟರ ಹಾಗೂ ತಾಲೂಕು ಘಟಕದ ಅಧ್ಯಕ್ಷ ಮೃತ್ಯುಂಜಯ ಬುಕ್ಕಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net