ಶ್ರೀರಾಮನ ಮಂತ್ರಾಕ್ಷತೆ ಭವ್ಯ ಮೆರವಣಿಗೆ ಡಿ.29ರಂದು

Sri Ramachandra
Published on

ಹಾವೇರಿ: ವಿಶ್ವ ಹಿಂದು ಪರಿಷತ್ ಹಾಗೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಗರದಲ್ಲಿ ಡಿ.29ರಂದು ಅಯೋಧ್ಯೆಯಿಂದ ಬಂದಿರುವ ಶ್ರೀ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಮತ್ತು ಮಂತ್ರಾಕ್ಷತೆಯ ಭವ್ಯ ಮೆರವಣಿಗೆ ಜರುಗಲಿದೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದೆ. ಪ್ರತಿಯೊಂದು ಹಿಂದುಗಳ ಮನೆಗೂ ಮಂತ್ರಾಕ್ಷತೆ ಮತ್ತು ಆಮಂತ್ರಣ ಮತ್ತು ರಾಮನ ಫೋಟೋ ವಿತರಣೆ ಮಾಡುವ ಕಾರ್ಯಕ್ರಮ ದೇಶಾದ್ಯಂತ ನಡೆದಿದೆ.
ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 3 ಗಂಟೆಗೆ ಇಲ್ಲಿನ ಹುಕ್ಕೇರಿ ಮಠದಿಂದ ಭವ್ಯ ಮೆರವಣಿಗೆ ಆರಂಭವಾಗಿ ಶ್ರೀರಾಮ ಮಂದಿರದವರೆಗೆ ಜರುಗಲಿದೆ. ಸಂಜೆ 5 ಗಂಟೆಗೆ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸಭಾ ಕಾರ್ಯಕ್ರಮ ಜರುಗಲಿದೆ. ಜಿಲ್ಲೆಯ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದು, ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಎಲ್ಲ ತಾಲೂಕು, ಹೋಬಳಿ ಕೇಂದ್ರಗಳಿಗೆ ಮಂತ್ರಾಕ್ಷತೆ ವಿತರಿಸಲಾಗುತ್ತದೆ. ಆದ್ದರಿಂದ ರಾಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ವಿಎಚ್‌ಪಿ ಜಿಲ್ಲಾ ಕಾರ್ಯದರ್ಶಿ ಅನಿಲ ಹಲವಾಗಲ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net