ಹಾವೇರಿ: ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ನಿರುದ್ಯೋಗಿ ಯುವಕರಿಗೆ ಮೇ 28ರಿಂದ 30 ದಿನಗಳ ಉಚಿತ ಮೊಬೈಲ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಜಿಲ್ಲೆಯ 18ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿ, ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ, ಹಾವೇರಿ ಸಂಪರ್ಕಿಸಲು ಕೋರಲಾಗಿದೆ.