ಹಾವೇರಿ: ದೇವಗಿರಿ ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿಯಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಜೂನ್ 10ರಿಂದ ಜುಲೈ 10ರವರೆಗೆ 30 ದಿನಗಳ ಉಚಿತ ಮೊಬೈಲ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಜಿಲ್ಲೆಯ 18ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಈ ತರಬೇತಿ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಬ್ಯಾಂಕ್ ಆಫ್ ಬರೋಡಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವಿಬ್‌ಸೆಟಿ, ಡಿ.ಸಿ ಆಫೀಸ್ ಕಟ್ಟಡದ ಹಿಂಭಾಗ, ದೇವಗಿರಿ- ಹಾವೇರಿ ಇಲ್ಲಿಗೆ ಸಂಪರ್ಕಿಸುವಂತೆ ಸಂಸ್ಥೆಯ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.