ವಿದ್ಯಾಸಿರಿ ಸೌಲಭ್ಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Published on

ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಪ್ರಸಕ್ತ 2023-24ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು 10 ಜನವರಿ, 2024ರೊಳಗಾಗಿ ಆನ್‌ಲೈನ್ ಮೂಲಕ (https://ssp.postmatric.karnataka.gov.in)ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ 1902 ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net