ಹಾವೇರಿ: ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯು 2023-24ನೇ ಸಾಲಿನನಲ್ಲಿ ವಿವಿಧ ಎಂಟು ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅ.15ರವರೆಗೆ ಅವಧಿ ವಿಸ್ತರಿಸಲಾಗಿದೆ.
ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ಬಹುಮಾನ, ಶಿಶುಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಆಧಾರ ಯೋಜನೆ, ಪುನರ್ವಸತಿ ಕಾರ್ಯಕರ್ತರ ಮರಣ ಪರಿಹಾರ ನಿಧಿ, ಸಾಧನೆ ಯೋಜನೆ, ಪ್ರತಿಭೆ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆಗಳ ಸೌಲಭ್ಯಕ್ಕಾಗಿ URL:http://sevasindu.karnataka.gov.in/sevasindhu/Departmentservicer ಆನ್‌ಲೈನ್ ಅರ್ಜಿ ಸಲ್ಲಿಸಬೇಕು.
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಯ ಹಾರ್ಡ್ ಪ್ರತಿಯನ್ನು ಆಯಾ ತಾಲೂಕಿನ ತಾಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲೂಗಳಿಗೆ ಸಲ್ಲಿಸುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.