ಅಂಗವಿಕಲರ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

Published on

ಹಾವೇರಿ: ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಂದ 2024ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿಕಲಚೇತನರು ಹಾಗೂ ಸಂಸ್ಥೆಗಳು ತಮ್ಮ ಜೀವಮಾನದ ಸಾಧನೆಗಳ ವಿವರಗಳೊಂದಿಗೆ ಜು.31ರೊಳಗಾಗಿ ಆನ್‌ಲೈನ್ www.awards.gov.in ಮೂಲಕ ಅರ್ಜಿ ಸಲ್ಲಿಸಬೇಕು. ಆನ್‌ಲೈನ್ ಅರ್ಜಿ ಸಲ್ಲಿಸಿದ ಒಂದು ಪ್ರತಿಯನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.depwd.gov.in ಅಥವಾ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿ, ಜಿಲ್ಲಾ ಆಡಳಿತ ಭವನ, ಕೊಠಡಿ ಸಂಖ್ಯೆ-04, ನೆಲಮಹಡಿ ದೇವಗಿರಿ, ಹಾವೇರಿ ಈ ವಿಳಾಸವನ್ನು ಸಂಪರ್ಕಿಸಬಹುದೆಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net