ರಾಷ್ಟ್ರೀಯ ಮತದಾರರ ದಿನಾಚರಣೆ ಜ.25ರಂದು

Published on

ಹಾವೇರಿ: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜ.25ರಂದು ಬೆಳಗ್ಗೆ 10.30ಕ್ಕೆ ನಗರದ ಗುರುಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು, ಇತರರು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಬೆಳಗ್ಗೆ 8 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳಿಂದ ಮಾನವ ಸರಪಳಿ ರಚನೆ ಕಾರ್ಯಕ್ರಮ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net