ಹಾವು ಕಚ್ಚಿ ಮಹಿಳೆ ಸಾವು

Published on

ಹಾವೇರಿ: ಜಮೀನಿನಲ್ಲಿ ಕಳೆ ತೆಗೆಯುತ್ತಿದ್ದ ಮಹಿಳೆಯೊಬ್ಬಳಿಗೆ ಸಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಸರೋಜವ್ವ ಈರಪ್ಪ ಬೋಳಕಟ್ಟಿ (72) ಮೃತ ಮಹಿಳೆ.
ಇವರು ಜಮೀನಿನಲ್ಲಿ ಕಳೆ ತೆಗೆಯುತ್ತಿದ್ದ ಸಮಯದಲ್ಲಿ ಹಾವು ಕಚ್ಚಿದೆ. ಕೂಡಲೇ ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net