ಹಾವೇರಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಕ್ರೀಡಾಕೂಟವನ್ನು ಮಾ.6ರಂದು ಬೆಳಗ್ಗೆ 9 ಗಂಟೆಗೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಮಾ.8ರಂದು ಶಿವರಾತ್ರಿ ಹಬ್ಬ ಇರುವ ಕಾರಣ ಮಾ.6ರಂದು ಕ್ರೀಡಾಕೂಟ ಆಯೋಜಿಸಲಾಗಿದೆ. ವಯಸ್ಸಿನ ಮಿತಿ ಇಲ್ಲದೇ ಮಹಿಳಾ ಕ್ರೀಡಾಕೂಟ ಮತ್ತು ಮನರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಗುಂಪು ಕ್ರೀಡೆಗಳಾದ ಕಬಡ್ಡಿ ಹಾಗೂ ಥ್ರೋಬಾಲ್ ಮತ್ತು ವೈಯಕ್ತಿಕ ಕ್ರೀಡೆಗಳಾದ 100 ಮೀಟರ್ ಓಟ, ಸಾಂಸ್ಕೃತಿಕ ಸ್ಪರ್ಧೆಗಳಾದ ಫ್ಯಾಷನ್ ಶೋ ಹಾಗೂ ಜನಪದ ಅಥವಾ ಸಿನಿಮಾ ಗೀತಗೆಗಳಿಗೆ ನೃತ್ಯ ಏರ್ಪಡಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ ಮನವಿ ಮಾಡಿದ್ದಾರೆ.