ಭೂಮಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ; ನ್ಯಾಯಾಧೀಶ ಬಿರಾದಾರ ದೇವಿಂದ್ರಪ್ಪ ಎನ್. ಹೇಳಿಕೆ

24 HVR 8
Published on

ಹಾವೇರಿ: ಮನುಷ್ಯರು ಸೇರಿದಂತೆ ಕೋಟ್ಯಂತರ ಜೀವಿಗಳು ವಾಸಿಸುವ ಏಕೈಕ ಗ್ರಹ ಭೂಮಿ. ಹಾಗಾಗಿ, ಭೂಮಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವಿಂದ್ರಪ್ಪ ಎನ್. ಹೇಳಿದರು.

ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ಅಭಿಯೋಜನಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಭೂದಿನಾಚರಣೆ ಸಮಾರಂಭ ಉದ್ಘಾಟಿಸಿ, ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮನುಷ್ಯನಲ್ಲಿರುವ ಅತಿಯಾದ ಆಸೆ ಭೂಮಿಗೆ ಮಾರಕವಾಗಿ ಪರಿಣಮಿಸುತ್ತಿದೆ. ಭೂಮಿಯ ವಾತಾವರಣದಲ್ಲಿ ಏರುಪೇರುಗಳು ಕಂಡುಬರುತ್ತಿವೆ ಹಾಗೂ ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ. ಈ ಹಿನ್ನಲೆಯಲ್ಲಿ ಭೂಮಿಯ ಸಂರಕ್ಷಣೆ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎಚ್ ಜತ್ತಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶರಾದ ಮೆಹಬೂಬಖಾನ್ ಗಾಜಿಖಾನ್, ನಿಂಗೌಡ ಬಿ.ಪಾಟೀಲ, ಪ್ರಕಾಶ ವಿ., ಬಿ.ಆರ್ ಮುತಾಲಿಕದೇಸಾಯಿ, ಶೈಜಲಾ ಎಚ್.ವಿ., ರವಿಪ್ರಕಾಶ ತಿಪ್ಪಣ್ಣ ಅವಿನ, ಬಿಪಿನ್ ಎಚ್.ಎಂ., ಸರ್ಕಾರಿ ಅಭಿಯೋಜಕ ಸಿದ್ದಾರೂಢ ಗೆಜ್ಜಿಹಳ್ಳಿ, ವಲಯ ಅರಣ್ಯಾಧಿಕಾರಿ ಶ್ರೀನಿವಾಸ ಆರ್. ಹಾಗೂ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net