ವಿಶ್ವ ವಿಕಲಚೇತನರ ದಿನಾಚರಣೆ

4 HVR 2
Published on

ಹಾವೇರಿ: ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ ಎಂಬ ವಿಶ್ವ ಸಂಸ್ಥೆಯ ಘೋಷವಾಕ್ಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಹೊಸಮಠದ ಶ್ರೀ ಬಸವೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಜರುಗಿತು.

ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ, ಉಪ ವಿಭಾಗಾಧಿಕಾರಿ ಎಚ್.ಬಿ.ಚನ್ನಪ್ಪ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಕಲ್ಯಾಣಧಿಕಾರಿ ಆಶು ನದಾಫ್, ಜಿಲ್ಲಾ ವಿಕಲಚೇತನರ ಸಂಘದ ಅಧ್ಯಕ್ಷ ಪುಟ್ಟಪ್ಪ ಜಲದಿ, ಉಪಾಧ್ಯಕ್ಷ ಮೌನೇಶ ಬಡಿಗೇರ ಹಾಗೂ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮತ್ತು ಶಾಲಾ ಮಕ್ಕಳು ಉಪಸ್ಥಿತರಿದ್ದರು.

ಆಕರ್ಷಕ ಜಾಥಾ :

ಕಾರ್ಯಕ್ರಮಕ್ಕೂ ಮೊದಲು ವಿಶ್ವ ವಿಕಲಚೇತನರ ದಿನಾಚರಣೆಯ ಪ್ರಯುಕ್ತ ನಗರದ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಜಾಥಾ ಹಾಗೂ ಬೈಕ್ ರ‌್ಯಾಲಿ ಜರುಗಿತು. ನಗರದ ವೀರಭದೇಶ್ವರ ದೇವಸ್ಥಾನದಿಂದ ಆರಂಭವಾಗಿ ನಗರದ ವಿವಿಧೆಡೆ ಸಂಚರಿಸಿ ಹೊಸಮಠದ ಸಮುದಾಯ ಭವನ ತಲುಪಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net