ಹಾವೇರಿ: ಜಿಲ್ಲಾ ನ್ಯಾಯಾಂಗ ಇಲಾಖೆ ಹಾಗೂ ಇತರ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಅ.10ರಂದು ಬೆಳಗ್ಗೆ 10.15ಕ್ಕೆ ನಗರದ ಸಿಂದಗಿ ಶಾಂತವೀರೇಶ್ವರ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಜರುಗಲಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕೆ.ಸಿ.ಸದಾನಂದಸ್ವಾಮಿ ಉದ್ಘಾಟಿಸಲಿದ್ದಾರೆ. ಮಹಾವಿದ್ಯಾಲಯ ಆಸ್ಪತ್ರೆ ಪ್ರಾಂಶುಪಾಲ ಡಾ.ಚಂದ್ರಶೇಖರ ಎನ್.ಗೌಡರ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿ.ಪಂ. ಸಿಇಒ ಅಕ್ಷಯ ಶ್ರೀಧರ, ಎಸ್‌ಪಿ ಅಂಶುಕುಮಾರ, ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಬಾಲಮುಕುಂದ ರಮೇಶರಾವ್ ಮುತಾಲಿಕದೇಸಾಯಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಮಹಾವಿದ್ಯಾಲಯ ಆಸ್ಪತ್ರೆ ಸ್ಥಾನಿಕ ಆಡಳಿತಾಧಿಕಾರಿ ವಿ.ಎಚ್.ಹಿರೇಮಠ, ಇತರರು ಭಾಗವಹಿಸಲಿದ್ದಾರೆ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯ ಡಾ.ವಿಜಯಕುಮಾರ ಬಿ. ಉಪನ್ಯಾಸ ನೀಡಲಿದ್ದಾರೆ.