ಹಾವೇರಿ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಅಕ್ಟೋಬರ್ 1ರಂದು ಬೆಳಗ್ಗೆ 10 ಗಂಟೆಗೆ ನಗರದ ಹೊಸಮಠದ ಬಸವೇಶ್ವರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ನಿವೃತ್ತ ನೌಕರರ ಸಂಘದ ಸಹಯೋಗದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಆಚರಿಸಲಾಗುತ್ತಿದೆ.
ಜಿಲ್ಲೆಯ ಎಲ್ಲ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಆಶು ನದಾಫ ತಿಳಿಸಿದ್ದಾರೆ.