ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಹಾವೇರಿ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮ ಸೆ.15ರಂದು ಬೆಳಗ್ಗೆ 10 ಗಂಟೆಗೆ ಕೆರಿಮತ್ತಿಹಳ್ಳಿಯ ಹಾವೇರಿ ವಿಶ್ವವಿದ್ಯಾಲಯದಲ್ಲಿ ಜರುಗಲಿದೆ.
ಶಾಸಕ ಬಸವರಾಜ ಶಿವಣ್ಣನವರ ಉದ್ಘಾಟಿಸಲಿದ್ದು, ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುರೇಶ ಜಂಗಮಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿಪಂ ಕಾರ್ಯನಿರ್ವಣಾಧಿಕಾರಿ ಅಕ್ಷಯ ಶ್ರೀಧರ, ಎಸ್‌ಪಿ ಡಾ.ಶಿವಕುಮಾರ ಗುಣಾರೆ, ಆಲದಕಟ್ಟಿ ಗ್ರಾಪಂ ಅಧ್ಯಕ್ಷ ನಿಂಗಪ್ಪ ನಿಂಬಕ್ಕನವರ, ಇತರರು ಭಾಗವಹಿಸಲಿದ್ದಾರೆ. ಜಿಲ್ಲಾ ಮನೋವೈದ್ಯ ಡಾ.ವಿಜಯಕುಮಾರ ಬಳಿಗಾರ ಉಪನ್ಯಾಸ ನೀಡಲಿದ್ದಾರೆ.