ಮೂರು ಗ್ರಾಪಂಗಳಿಗೆ ರಾಷ್ಟ್ರೀಯ ಪಂಚಾಯಿತಿ ಪುರಸ್ಕಾರ; ಬುಡಪನಹಳ್ಳಿ, ಶಿಡೇನೂರ, ಹುನುಗುಂದ ಗ್ರಾಮಕ್ಕೆ ಪ್ರಶಸ್ತಿಯ ಗರಿ

ZP CEO Akshay Shreedhar
Published on

ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹುನುಗುಂದ, ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಹಾಗೂ ಶಿಡೇನೂರು ಗ್ರಾಮ ಪಂಚಾಯಿತಿಗಳಿಗೆ ರಾಷ್ಟ್ರೀಯ ಪಂಚಾಯಿತಿ ಪುರಸ್ಕಾರ-2024 ಪ್ರಶಸ್ತಿ ಲಭಿಸಿದೆ.

ಉತ್ತಮ ಆಡಳಿತ ಹೊಂದಿರುವ ಪಂಚಾಯಿತಿಗಳಿಗೆ ಪ್ರಶಸ್ತಿ ಲಭಿಸಿದೆ. ಗ್ರಾಮ ಪಂಚಾಯಿತಿಗಳಲ್ಲಿ ಉತ್ತಮ ಆಡಳಿತ ಮತ್ತು ಸೇವೆಗಾಗಿ ನಿರಂತರ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕಾರ್ಯವೈಖರಿಯನ್ನು ಅರಿತು, ತಪಾಸಣೆ ನಂತರ ಕೇಂದ್ರ ಸರ್ಕಾರಕ್ಕೆ ಶಿಪಾರ‌್ಸಸು ಮಾಡಲಾಗಿತ್ತು. ಕೇಂದ್ರ ಸರ್ಕಾರದಿಂದ ಆಯ್ಕೆ ಮಾಡಲಾಗಿದೆ.

ಡಿ.11ರಂದು ನವದೆಹಯ ವಿಜ್ಞಾನ ಭವನದಲ್ಲಿ ನಡೆಯುವ ರಾಷ್ಟ್ರೀಯ ಪಂಚಾಯಿತಿ ಪ್ರಶಸ್ತಿಗಳ ಪ್ರಧಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ವಿತರಿಸಲಿದ್ದಾರೆ. ಶಿಗ್ಗಾಂವಿ ತಾಲೂಕು ಹುನಗುಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಾಗರಾಜ ಮೂಲಿಮನಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೃಪತಿ ಭೂಸರೆಡ್ಡಿ, ಬ್ಯಾಡಗಿ ತಾಲೂಕಿನ ಶಿಡೇನೂರ ಗ್ರಾಪಂ ಅಧ್ಯಕ್ಷೆ ಬಿಬಿ ಆಯುಷಾ ಹಾಗೂ ಪಿಡಿಒ ಶಾರದಾ ಕುದರಿ, ಬುಡಪನಹಳ್ಳಿ ಗ್ರಾಪಂ ಅಧ್ಯಕ್ಷ ಬಸಪ್ಪ ಗೊರವರ ಹಾಗೂ ಪಿಡಿಒ ಪರಶುರಾಮ ಅಗಸನಹಳ್ಳಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅಕ್ಷಯ ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net