ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಜಿಪಂ ಸಿಇಒ ಅಕ್ಷಯ; ಹೆಚ್ಚುವರಿ 20 ಬೆಡ್ ವ್ಯವಸ್ಥೆ

10 HVR 12
Published on

ಹಾವೇರಿ: ಡೆಂಘೆ ಹಾಗೂ ಜ್ವರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನದಲ್ಲಿ ಹೆಚ್ಚುವರಿ 20ಕ್ಕೂ ಅಧಿಕ ಬೆಡ್ ವ್ಯವಸ್ಥೆ ಮಾಡಲಾಗುವುದು. ಪ್ರತ್ಯೇಕ ವಾರ್ಡ್ ಸ್ಥಾಪಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಹೇಳಿದರು.
ಡೆಂಘೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು. ಆಸ್ಪತ್ರೆ ವೈದ್ಯಾಧಿಕಾರಿಗಳು ಹಾಗೂ ರೋಗಿಗಳಿಂದ ಮಾಹಿತಿ ಪಡೆದರು. ಶಂಕಿತ ಡೆಂೆಯಿಂದ ಬಳಲುತ್ತಿರುವ ಚಿಕ್ಕಮಕ್ಕಳ ವಾರ್ಡ್‌ಗೆ ಭೇಟಿ ನೀಡಿ, ಮಕ್ಕಳು ಹಾಗೂ ಪಾಲಕರೊಂದಿಗೆ ಚರ್ಚಿಸಿದರು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net