

ಹಾವೇರಿ: ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು, ಖಾಸಗಿ ಉದ್ಯಮಿಗಳು, ಚುನಾಯಿತ ಪ್ರತಿನಿಧಿಗಳು, ಕೈಗಾರಿಕೆಗಳ ಮಾಲೀಕರು, ನಿಕ್ಷಯ ಮಿತ್ರರಾಗಿ ಕ್ಷಯರೋಗಿಗಳನ್ನು ದತ್ತು ಪಡೆದು ಚಿಕಿತ್ಸೆ ಮುಗಿಯವವರಿಗೆ ಪೌಷ್ಠಿಕ ಆಹಾರದ ಕಿಟ್‌ಗಳನ್ನು ನೀಡಲು ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಕರೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ಚಿಕಿತ್ಸೆ ನಿರತ ಕ್ಷಯರೋಗಿಯನ್ನು ದತ್ತು ಪಡೆದು, ಪೌಷ್ಠಿಕ ಆಹಾರದ ಕಿಟ್ ವಿತರಣೆ ಮಾಡಿ ಮಾತನಾಡಿದರು. ಜಿಲ್ಲೆಯ ಎಲ್ಲ ಇಲಾಖೆಗ: ಅಧಿಕಾರಿಗಳು ಹಾಗೂ ಸಿಬ್ಬಂದಿ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಷಯರೋಗಿಗಳಿಗೆ ಚಿಕಿತ್ಸೆ ಪೂರ್ಣಗೊಳಿಸುವವರೆಗೆ ನಿಕ್ಷಯ ಮಿತ್ರರಾಗಿ ಪೌಷ್ಠಿಕ ಆಹಾರ ಕಿಟ್‌ಗಳನ್ನು ವಿತರಿಸಬೇಕು. ಇದರಿಂದ ಕ್ಷಯರೋಗಿಗಳು ಗುಣಮುಖರಾಗಲು ಸಹಕಾರಿಯಾಗುತ್ತದೆ. ಕ್ಷಯ ಮುಕ್ತ ಜಿಲ್ಲೆಯಾಗಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಾನಂದ, ಆರೋಪಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.