ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ಜಿಪಂ ಸಿಇಒ ಚಾಲನೆ; ಸ್ವಚ್ಛತೆ ನಮ್ಮ ಮನೆಯಿಂದಲೇ ಆರಂಭವಾಗಬೇಕು, ರುಚಿ ಬಿಂದಲ್

Published on

ಹಾವೇರಿ: ಸ್ವಚ್ಛತೆ ನಮ್ಮ ಮನೆಯಿಂದ ಆರಂಭವಾಗಬೇಕು. ಮನೆಯ ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸಿ ಕಸ ವಿಲೇವಾರಿ ವಾಹನಕ್ಕೆ ಹಾಕುವ ಮೂಲಕ ಸ್ವಚ್ಛ ಹಾಗೂ ಸುಂದರ ಪರಿಸರ ಕಾಪಾಡಲು ಎಲ್ಲರೂ ಕೈ ಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್ ಹೇಳಿದರು.

ತಾಲೂಕಿನ ಕುಳೇನೂರ ಗ್ರಾಮದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ಚಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಮೂಡಿಸುವ ಜಾಥಾಕ್ಕೆ ಚಾಲನೆ ನೀಡಿ, ಸ್ವಚ್ಛತೆಯ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.

ಸಮಾರಂಭದಲ್ಲಿ ಸ್ಚಚ್ಛ ವಾಹಿನಿ ವಾಹನ ಚಾಲಕಿ ಹಾಗೂ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುವ ಸಫಾಯಿ ಕರ್ಮಚಾರಿಗಳಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ.ಉಪ ಕಾರ್ಯದರ್ಶಿ ಪುನಿತ್ ಆರ್., ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರ ಹುಬ್ಬಳ್ಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಎಸ್.ಬಿ.ಎಂ. ಸಂಯೋಜಕ ಗೋವಿಂದ ಬಾರಿಕರ, ದೀಪಕ ನಾಯ್ಕ, ಸುನಿತಾ ನಾಗನಗೌಡ್ರ ಹಾಗೂ ಶಿಕ್ಷಕರು ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net