ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ-2024ರ ಅಂಗವಾಗಿ ತಡಸ, ವಡಘಟ್ಟ ಮತ್ತು ಕೋಣನಕೇರಿ ಗ್ರಾಮದ ಜಿಲ್ಲಾ ಗಡಿಭಾಗದಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟ್‌ಗಳಿಗೆ ಸೋಮವಾರ, ಮಂಗಳವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಭೇಟಿ ನೀಡಿ, ವಾಹನ ತಪಾಸಣೆ ಕಾರ್ಯದ ಪರಿಶೀಲನೆ ನಡೆಸಿದರು.
ನಂತರ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಎಂ.ಸಿ.ಸಿ. ಹಾಗೂ ಹಾಗೂ ಸ್ವೀಪ್ ಕಾರ್ಯಕ್ರಮದ ಅನುಷ್ಠಾನದ ಕುರಿತು ತಾಲೂಕು ನೋಡಲ್ ಅಧಿಕಾರಿಗಳ ಸಭೆ ನಡೆಸಿ ಅಧಿಕಾರಿಗಳಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್, ಶಿಗ್ಗಾಂವಿ ತಹಸೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂತೋಷ ಹಿರೇಮಠ, ಸವಣೂರ ತಹಸೀಲ್ದಾರ, ಶಿಗ್ಗಾಂವಿ ಹಾಗೂ ಸವಣೂರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.