ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ ಇಂದು

Published on

ಹಾವೇರಿ: ನೂತನ ಸರ್ಕಾರದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅಧ್ಯಕ್ಷತೆಯಲ್ಲಿ ಮೊದಲ ತ್ರೈಮಾಸಿಕ ಕೆಡಿಪಿ ಸಭೆ ಜು.1ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ.
ಕಳೆದ 2022-23 ಮತ್ತು 2023-24ನೇ ಸಾಲಿನ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು ತ್ರೈಮಾಸಿಕ ಕೆಡಿಪಿ ಸಭೆ ಕರೆಯಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net