ಜಿಪಂ, ತಾಪಂ ಕರಡು ಮತದಾರರ ಪಟ್ಟಿ ಪ್ರಕಟ

hvr-dc-office-ph
Published on

ಹಾವೇರಿ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಜಿಲ್ಲೆಯ 8 ತಾಲೂಕು ವ್ಯಾಪ್ತಿಯ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಜೂ.23ರಂದು ಪ್ರಕಟಿಸಲಾಗಿದೆ. ಮತದಾರರು ತಮ್ಮ ಹೆಸರು ಪ್ರಕಟಿಸಿರುವ ಬಗ್ಗೆ ಪರಿಶೀಲಿಸಿಕೊಳ್ಳುವುದು. ರಾಜ್ಯ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಅರ್ಹ ಮತದಾರರು ಜೂ.23ರಿಂದ ಜುಲೈ 4ರವರೆಗೆ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಕಡಿಮೆಗೊಳಿಸಲು ನಿಗದಿತ ನಮೂನೆಗಳಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಸ್ವೀಕರಿಸುವ ಆಕ್ಷೇಪಣೆಗಳನ್ನು ಜುಲೈ 7ರಂದು ಇತ್ಯರ್ಥಪಡಿಸಲಾಗುವುದು ಮತ್ತು ಅಂತಿಮ ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ನಿರ್ದೇಶನದಂತೆ ಜಿಲ್ಲೆಯಲ್ಲಿ ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net