ಜಿಮ್ ಸ್ಥಾಪನೆಗೆ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Published on

ಹಾವೇರಿ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗೆ ಸಹಾಯಧನ ಸೌಲಭ್ಯಕ್ಕೆ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿಯ ಕರ್ನಾಟಕದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾವೇರಿ ಈ ವಿಳಾಸದಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸೆ.6ರ ಒಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ಹಾವೇರಿ ಇಲ್ಲಿ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net