ಹಳ್ಳೂರಲ್ಲಿ ಕನ್ನಡದ ಹಬ್ಬ ನಾಳೆ

ರಟ್ಟಿಹಳ್ಳಿ ತಾಲೂಕು ಹಳ್ಳೂರು ಗ್ರಾಮದಲ್ಲಿ ಜರುಗಲಿರುವ 3ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಸಿದ್ಧಗೊಳ್ಳುತ್ತಿರುವುದು.
ರಟ್ಟಿಹಳ್ಳಿ ತಾಲೂಕು ಹಳ್ಳೂರು ಗ್ರಾಮದಲ್ಲಿ ಜರುಗಲಿರುವ 3ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ಸಿದ್ಧಗೊಳ್ಳುತ್ತಿರುವುದು.
Published on
ವಿಜಯವಾಣಿ ಸುದ್ದಿಜಾಲ ರಟ್ಟಿಹಳ್ಳಿ
ತಾಲೂಕಿನ ಹಳ್ಳೂರು ಗ್ರಾಮದ ಶ್ರೀ ಕ್ಷೇತ್ರ ಲಕ್ಷ್ಮೀ ರಂಗನಾಥ ದೇವಸ್ಥಾನದ ಆವರಣದಲ್ಲಿ 3ನೇ ರಟ್ಟಿಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜ.31ರಂದು ಜರುಗಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ ಭರದಿಂದ ಸಾಗಿವೆ.
ಬೆಳಗ್ಗೆ 7.30ಕ್ಕೆ ಜರುಗಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ದೇವಸ್ಥಾನದ ಧರ್ಮದರ್ಶಿ ಬಿ.ಎಂ. ಮೆಣಸಿನಕಾಯಿ ರಾಷ್ಟ್ರ ಧ್ವಜಾರೋಹಣ, ನಾಡ ಧ್ವಜಾರೋಹಣವನ್ನು ತಹಸೀಲ್ದಾರ್ ಶ್ವೇತಾ ಅಮರಾವತಿ ಮತ್ತು ಪರಿಷತ್ ಧ್ವಜಾರೋಹಣವನ್ನು ಕ.ಸಾ.ಪ ತಾಲೂಕು ಅಧ್ಯಕ್ಷ ಎಂ.ಸಿ. ತುಮ್ಮಿನಕಟ್ಟಿ ನೆರವೇರಿಸುವರು. ಬೆಳಗ್ಗೆ 8 ಗಂಟೆಗೆ ಗ್ರಾ.ಪಂ.ಅಧ್ಯಕ್ಷ ಲತಾ ಮಂಜುನಾಥ ಹರಿಜನ ನಾಡದೇವಿ ಭುವನೇಶ್ವರಿ ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ಉದ್ಘಾಟನೆ ಮಾಡುವರು.
ಬೆಳಗ್ಗೆ 10.30ಕ್ಕೆ ಶಾಸಕ ಯು.ಬಿ. ಬಣಕಾರ ಸಮ್ಮೇಳನ ಉದ್ಘಾಟಿಸುವರು. ಸ್ಥಳೀಯ ಕಬ್ಬಿಣಕಂತಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಜಯಕವಿ ಜಯಪ್ಪ ಹೊನ್ನಾಳಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ, ಧರ್ಮದರ್ಶಿ ಬಿ.ಎಂ. ಮೆಣಸಿನಕಾಯಿ ಘನ ಉಪಸ್ಥಿತಿ, ಎಂ.ಸಿ. ತುಮ್ಮಿನಕಟ್ಟಿ ಸಮ್ಮೇಳನ ಅಧ್ಯಕ್ಷತೆ ವಹಿಸುವರು. ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಮಾಜಿ ಮುಖ್ಯಸಚೇತಕ ಡಿ.ಎಂ. ಸಾಲಿ ಕೃತಿಗಳ ಲೋಕಾರ್ಪಣೆ ಮಾಡುವರು. ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಕೃಷಿ ವಸ್ತು ಪ್ರದರ್ಶನ ಉದ್ಘಾಟನೆ, ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ ಪುಸ್ತಕ ಮಳಿಗೆ, ಜಿಲ್ಲಾ ಕ.ಸಾ.ಪ ಅಧ್ಯಕ್ಷ ಲಿಂಗಯ್ಯ ಹಿರೇಮಠ ಆರೋಗ್ಯ ತಪಾಸಣೆ ಶಿಬಿರ, ಚಿತ್ರಕಲಾ ಪ್ರದರ್ಶನ ಮಳಿಗೆ ಉದ್ಘಾಟಿಸುವರು.
ಮಧ್ಯಾಹ್ನ ಕವಿಗೋಷ್ಠಿ, ಮಹಿಳಾಗೋಷ್ಠಿಗಳು ನಡೆಯಲಿವೆ. ಸಂಜೆ 5 ಗಂಟೆಗೆ ಬಹಿರಂಗ ಅಧಿವೇಶನ ಜರುಗಲಿದೆ. ಉಪನ್ಯಾಸಕ ಸತೀಶ ಮಡಿವಾಳರ ನಿರ್ಣಯ ಮಂಡನೆ ಮಾಡಲಿದ್ದಾರೆ. ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ಜರುಗಲಿದೆ. ಶ್ರೀ ಮಹಾಂತ ಸ್ವಾಮೀಜಿ ಮತ್ತು ಶಿವಯೋಗಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಸಚಿವ ಬಿ.ಸಿ. ಪಾಟೀಲ ದ್ವಿತೀಯ ಸಮ್ಮೇಳನದ ಸ್ಮರಣ ಸಂಚಿಕೆ ಕಂಜರವನ್ನು ಬಿಡಗಡೆ ಮಾಡಲಿದ್ದಾರೆ. ಸಾಹಿತಿ ಡಾ. ನಿಂಗಪ್ಪ ಚಳಗೇರಿ ಅಭಿನಂದನಾ ನುಡಿ ಆಗಲಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net