

ರಾಣೆಬೆನ್ನೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಜಗದೀಶಪ್ಪ ಶ್ರೇಷ್ಠಪ್ಪ ಹಿಂಡೇರ (48) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಪತ್ನಿ ಕೂಡ ತವರು ಮನೆಗೆ ಹೋಗಿದ್ದರು. ಹೀಗಾಗಿ ಬೇಸರಗೊಂಡ ಜಗದೀಶಪ್ಪ ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.