

ರಾಣೆಬೆನ್ನೂರು: ಮದ್ಯ ಸೇವಿಸಿದ ಅಮಲಿನಲ್ಲಿ ಟಿನ್ನರ್ ಕುಡಿದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ತಾಲೂಕಿನ ತೆರೆದಹಳ್ಳಿಯಲ್ಲಿ ನಡೆದಿದೆ.
ಶ್ರೀಕಾಂತ ಕರಿಯಪ್ಪ ಎಲಿಗಾರ (35) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಮದ್ಯ ಸೇವಿಸಿದ ಅಮಲಿನಲ್ಲಿ ಟಿನ್ನರ್ ಕುಡಿದು ಅಸ್ವಸ್ಥಗೊಂಡಿದ್ದ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿತ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.