ಮದ್ಯ ಸೇವಿಸುತ್ತಿದ್ದ ವ್ಯಕ್ತಿ ಬೇಸರಗೊಂಡು ಆತ್ಮಹತ್ಯೆ

Crime
Crime
Published on

ಹಾವೇರಿ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಲಿಂಗದಹಳ್ಳಿಯಲ್ಲಿ ನಡೆದಿದೆ.

ಗಣೇಶ ಚಂದ್ರಪ್ಪ ಇಟಗಿ (28) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಬೇಸರಗೊಂಡು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net