

ಹಾವೇರಿ: ಮದ್ಯ ಸೇವಿಸಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ.
ಪ್ರಕಾಶ ನೀಲಪ್ಪ ಲಕ್ಷ್ಮೇಶ್ವರ (35) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಮದ್ಯ ಸೇವಿಸಿದ ಅಮಲಿನಲ್ಲಿ ನೇಣು ಬಿಗಿದುಕೊಂಡಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.