education ಶಿಕ್ಷಣಕ್ಕೆ ಶೇ. 30 ಅನುದಾನ ಮೀಸಲಿಡಿ

ಶಿಕ್ಷಣ ಕ್ಷೇತ್ರದ (education) ಅಭಿವೃದ್ಧಿಗೆ ಬಜೆಟ್​ನಲ್ಲಿ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಹಿರೇಕೆರೂರ ಶಾಸಕ ಯು.ಬಿ. ಬಣಕಾರ ಅವರಿಗೆ ಎಸ್​ಎಫ್​ಐ ಮುಖಂಡರು ಮನವಿ ಸಲ್ಲಿಸಿದರು.
ಶಿಕ್ಷಣ ಕ್ಷೇತ್ರದ (education) ಅಭಿವೃದ್ಧಿಗೆ ಬಜೆಟ್​ನಲ್ಲಿ ಅನುದಾನ ಮೀಸಲಿಡುವಂತೆ ಒತ್ತಾಯಿಸಿ ಹಿರೇಕೆರೂರ ಶಾಸಕ ಯು.ಬಿ. ಬಣಕಾರ ಅವರಿಗೆ ಎಸ್​ಎಫ್​ಐ ಮುಖಂಡರು ಮನವಿ ಸಲ್ಲಿಸಿದರು.
Published on
ಎಸ್​ಎಫ್​ಐ ಜಿಲ್ಲಾ ಮುಖಂಡ ಅರುಣ್ ನಾಗವತ್ ಮಾತನಾಡಿ, ತಾಲೂಕಿಗೆ ಸರ್ಕಾರಿ ನರ್ಸಿಂಗ್, ಪ್ಯಾರಾಮೆಡಿಕಲ್, ಬಿ. ಫಾಮ್ರ್, ಜಿಟಿಟಿಸಿ ಹಾಗೂ ಡಿಪ್ಲೊಮಾ ಕಾಲೇಜು ಮಂಜೂರು ಮಾಡಬೇಕು. ಹಾವೇರಿ ವಿವಿ, ಜಾನಪದ ವಿವಿ ಹಾಗೂ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯ ಸೇರಿದಂತೆ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಉನ್ನತ ಶಿಕ್ಷಣಕ್ಕಾಗಿ ಸಾಲ ಪಡೆದ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಎಲ್​ಕೆಜಿಯಿಂದ ಪಿಎಚ್​ಡಿವರೆಗಿನ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್​ಪಾಸ್ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
"

ವಿದ್ಯಾರ್ಥಿಗಳ ಬೇಡಿಕೆಗಳ ಬಗ್ಗೆ ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತದಿದ್ದರೆ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು. ಹಾಸ್ಟೆಲ್ ವಿದ್ಯಾರ್ಥಿಗಳ ಮಾಸಿಕ ಆಹಾರ ಭತ್ಯೆಯನ್ನು ಕನಿಷ್ಠ 4,500 ರೂ.ಗಳಿಗೆ ಹೆಚ್ಚಿಸಬೇಕು. ತಾಲೂಕಿಗೆ ಹೆಚ್ಚುವರಿಯಾಗಿ ಕನಿಷ್ಠ 10 ಹಾಸ್ಟೆಲ್​ಗಳನ್ನು ಮಂಜೂರು ಮಾಡಬೇಕು.

| ಭರತ ಮಡಿವಾಳರ ಎಸ್​ಎಫ್​ಐ ಹಾಸ್ಟೆಲ್ ಘಟಕದ ಅಧ್ಯಕ್ಷ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net