ಅಡಿಕೆ ತೋಟದಲ್ಲಿ ಹಾವು ಕಚ್ಚಿ ಮಹಿಳೆ ಸಾವು

Crime
Crime
Published on

ರಟ್ಟಿಹಳ್ಳಿ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಹಾವು ಕಚ್ಚಿ ಮೃತಪಟ್ಟ ಘಟನೆ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೂಲಂಬಿ ಗ್ರಾಮದ ಮಮತಾ ಚಂದ್ರಶೇಖರ ರಡ್ಡೇರ (35) ಮೃತ ಮಹಿಳೆ.

ಇವರು ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ ಹಾವು ಕಚ್ಚಿದೆ. ಇದರಿಂದ ಮಮತಾ ಸ್ಥಳದಲ್ಲಿಯೆ ಮೃತಪಟ್ಟಿದ್ದಾಳೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net